ಅಪಘಾತದಲ್ಲಿ ‘ಕಾಟೇರ’ ನಟ ಮಾಸ್ಟರ್ ರೋಹಿತ್ ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.

ಹೊಸಹಳ್ಳಿ ಗೇಟ್ ನ ಶ್ರೀರಂಗಪಟ್ಟಣ- ಕೆಆರ್ಎಸ್ ಹೆದ್ದಾರಿಯಲ್ಲಿ ಶನಿವಾರ ಅಪಘಾತ ಸಂಭವಿಸಿದ್ದು, ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾದ ಬಾಲನಟ ಮಾಸ್ಟರ್ ರೋಹಿತ್ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ರೋಹಿತ್ ಅವರ ದವಡೆ ಮುರಿದಿದ್ದು, ತಲೆಗೆ ಗಾಯವಾಗಿದೆ. ಅವರ ತಾಯಿ ಛಾಯಾಲಕ್ಷ್ಮಿ ಅವರ ಕೈ, ಕಾಲಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ಟರ್ ರೋಹಿತ್ ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ನಟಿಸಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read