HomeKarnatakaBREAKING: KSRTC ಬಸ್ –ಲಾರಿ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ವಿದ್ಯಾರ್ಥಿ ಸಾವು, 14 ಪ್ರಯಾಣಿಕರಿಗೆ ಗಾಯ

BREAKING: KSRTC ಬಸ್ –ಲಾರಿ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ವಿದ್ಯಾರ್ಥಿ ಸಾವು, 14 ಪ್ರಯಾಣಿಕರಿಗೆ ಗಾಯ

ಬಾಗಲಕೋಟೆ: ಲಾರಿ -ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು ಕಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಸಮೀಪ ನಡೆದಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ವಿದ್ಯಾರ್ಥಿ ರಾಹುಲ್ ಪಾಟೀಲ್(17) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 14 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ರಾಹುಲ್ ಪಾಟೀಲ್ ಬೀಳಗಿ ತಾಲೂಕಿನ ಅರಕೇರಿ ನಿವಾಸಿಯಾಗಿದ್ದಾರೆ. ಅಮಲಜರಿಯಿಂದ ಬಾಗಲಕೋಟೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಲಾರಿ ಚಾಲಕನ ಆಚಾತುರ್ಯದಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular