HomeKarnatakaಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ವಿದೇಶಿ ಪ್ರವಾಸಿಗ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ನಡೆದಿದೆ.

ಫ್ರಾನ್ಸ್ ದೇಶದ ಪ್ರವಾಸಿಗ ಮೊನ್ಸಲರ್(63) ಮೃತಪಟ್ಟವರು ಎಂದು ಹೇಳಲಾಗಿದೆ. ಅಕ್ಟೋಬರ್ 26ರಂದು ಐದು ಜನ ಸ್ನೇಹಿತರೊಂದಿಗೆ ಹಂಪಿ ಪ್ರವಾಸಕ್ಕೆ ಬಂದಿದ್ದ ಅವರು ಇಂದು ಬೈಕ್ ನಲ್ಲಿ ಗೋವಾಕ್ಕೆ ತೆರಳುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸಾಪುರ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular