HomeLatest NewsBIG NEWS: ಗೂಡ್ಸ್ ವಾಹನ- ಬೈಕ್ ಭೀಕರ ಅಪಘಾತ: ದೇವಸ್ಥಾನದ ಅರ್ಚಕ ಸೇರಿ ಇಬ್ಬರು ಸ್ಥಳದಲ್ಲೇ...

BIG NEWS: ಗೂಡ್ಸ್ ವಾಹನ- ಬೈಕ್ ಭೀಕರ ಅಪಘಾತ: ದೇವಸ್ಥಾನದ ಅರ್ಚಕ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದ ಮುಳೂರು ಘಾಟ್ ಬಳಿ ನಡೆದಿದೆ.

ಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೇವಸ್ಥಾನದ ಮುಖ್ಯ ಅರ್ಚಕ ವಿಜಯಕುಮಾರ್ ಘೋಡಬೋಲೆ (55) ಹಾಗೂ ಕಲಬುರಗಿ ಮೂಲದ ಗೂಡ್ಸ್ ವಾಹನದ ಚಾಲಕ ಅನಿಲ್ ರಮೇಶ ಬಿರಾದಾರ( 23) ಇಬ್ಬರೂ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular