HomeLatest Newsಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ: ರಸ್ತೆ ಅಪಘಾತದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟೆ ಬಳಿ ಶುಕ್ರವಾರ ರಾತ್ರಿ ಬೈಕ್ ಸವಾರ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

 ಚೇತನ್ ಮೊಗವೀರ ಮೃತಪಟ್ಟವರು. ಉಡುಪಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಹೊಸನಗರದಿಂದ ಸ್ವಗ್ರಾಮ ಮಾವಿನಕಟ್ಟೆಗೆ ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಪ್ಪನ್ ಪೇಟೆ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಸೂಡೂರು ಗೇಟ್ ನಡುವೆ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಸಮೀಪದ ಹೊಸೂರು ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್.(65) ಮೃತಪಟ್ಟವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥದಿಂದ ಊರಿಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular