ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಹಾಡಗೇರಿ ಗ್ರಾಮದಲ್ಲಿ ತೋಟದಲ್ಲಿ ಮಂಗಗಳನ್ನು ಓಡಿಸುವ ವೇಳೆ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗಲಿ ಮೃತಪಟ್ಟ ಘಟನೆ ನಡೆದಿದೆ.
ಸುಬ್ರಹ್ಮಣ್ಯ ಮಂಜುನಾಥ ಮರಾಠಿ(19) ಮೃತಪಟ್ಟ ಯುವಕ. ತೋಟದಲ್ಲಿ ಮಂಗಗಳನ್ನು ಓಡಿಸಲು ಏರ್ ಗನ್ ತೆಗೆದುಕೊಂಡು ಹೋಗಿದ್ದ ವೇಳೆ ಏಕಾಏಕಿ ಗುಂಡು ಹಾರಿದೆ. ಗುಂಡು ನೇರವಾಗಿ ಸುಬ್ರಮಣ್ಯ ಅವರ ಎದೆಗೆ ತಗುಲಿದೆ. ಗಂಭೀರವಾಗಿ ಗಾಯಗೊಂಡ ಸುಬ್ರಮಣ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸಿಪಿಐ ಸಿದ್ದರಾಮೇಶ್ವರ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

