ಮೈಸೂರು: ಜಾತಿ ಗಣತಿಗೆ ತೆರಳಿದ್ದ ವೇಳೆ ಕಾರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡಿದ್ದಾರೆ.
ಹೆಚ್.ಡಿ. ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸ್ವಾಮಿಗೌಡ, ಸಹಶಿಕ್ಷಕಿ ಮಧುಶ್ರೀ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮುಖ್ಯ ಶಿಕ್ಷಕ ಸ್ವಾಮಿಗೌಡ ಅವರ ಕಾಲು ಮುರಿದಿದೆ. ಸಹ ಶಿಕ್ಷಕಿ ಮಧುಶ್ರೀ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಇಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
