HomeLatest Newsಜಾತಿ ಗಣತಿಗೆ ತೆರಳಿದ್ದ ವೇಳೆ ಅಪಘಾತ: ಶಿಕ್ಷಕನ ಕಾಲು ಮುರಿತ, ಸಹ ಶಿಕ್ಷಕಿಗೆ ಗಾಯ

ಜಾತಿ ಗಣತಿಗೆ ತೆರಳಿದ್ದ ವೇಳೆ ಅಪಘಾತ: ಶಿಕ್ಷಕನ ಕಾಲು ಮುರಿತ, ಸಹ ಶಿಕ್ಷಕಿಗೆ ಗಾಯ

ಮೈಸೂರು: ಜಾತಿ ಗಣತಿಗೆ ತೆರಳಿದ್ದ ವೇಳೆ ಕಾರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡಿದ್ದಾರೆ.

ಹೆಚ್.ಡಿ. ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸ್ವಾಮಿಗೌಡ, ಸಹಶಿಕ್ಷಕಿ ಮಧುಶ್ರೀ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮುಖ್ಯ ಶಿಕ್ಷಕ ಸ್ವಾಮಿಗೌಡ ಅವರ ಕಾಲು ಮುರಿದಿದೆ. ಸಹ ಶಿಕ್ಷಕಿ ಮಧುಶ್ರೀ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಇಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular