HomeLatest NewsBIG NEWS: ಬೆಂಗಳೂರಿನಲ್ಲಿ ಮತ್ತೊಂದು ಸರಣಿ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಸರಣಿ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸರಣಿ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಮೆಯೋಹಾಲ್ ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಕಾರು ಹಾಗೂ ಬೈಕ್ ಗೆ ಹಿಂಬದಿಯಿಂದ ಬಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಜಲಿ (36) ಮೃತ ಮಹಿಳೆ.

ಅಪಘಾತದಲ್ಲಿ ಬೈಕ್ ಸವಾರ ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular