HomeKarnatakaಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ

ಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದು, ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆರವನಾಡಿನ ಹೆಚ್.ಡಿ. ತಮ್ಮಯ್ಯ(57) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ ಚೈನ್ ಗೇಟ್ ಬಳಿ ಧನಲ್ ಸುಬ್ಬಯ್ಯ(24) ಎಂಬ ಯುವಕನ ಬೈಕ್ ಗೆ ತಮ್ಮಯ್ಯ ಅವರ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಯತಪ್ಪಿ ಕೆಳಗೆ ಬಿದ್ದ ಧನಲ್ ಸುಬ್ಬಯ್ಯ ಅವರ ಮೇಲೆ ಅದೇ ಮಾರ್ಗವಾಗಿ ಬರುತ್ತಿದ್ದ ಲಾರಿ ಹರಿದು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಘಟನೆಯಿಂದಾಗಿ ಆಘಾತಕ್ಕೆ ಒಳಗಾಗಿದ್ದ ತಮ್ಮಯ್ಯ ಪೊಲೀಸರಿಗೆ ಹೇಳಿಕೆ ನೀಡಿದ ಬಳಿಕ ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular