HomeLatest NewsBIG NEWS: ನಾಯಿ ತಪ್ಪಿಸಲು ಹೋಗಿ ಭೀಕರ ಅಪಘಾತ: ASI ಸ್ಥಳದಲ್ಲೇ ಸಾವು

BIG NEWS: ನಾಯಿ ತಪ್ಪಿಸಲು ಹೋಗಿ ಭೀಕರ ಅಪಘಾತ: ASI ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ರಸ್ತೆಗೆ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಎಎಸ್ಐ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ನಲ್ಲಿ ಈ ದುರಂತ ಸಂಭವಿಸಿದೆ. ಪರಶರಾಂಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (50) ಮೃತ ದುರ್ದೈವಿ.

ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ ಆಗಿವಾಗ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದಿದೆ. ನಾಯಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿದ್ದು, ಕೆಳಗೆ ಬಿದ್ದ ಎಎಸ್ಐ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೈಕ್ ನಲ್ಲಿದ್ದ ಮತ್ತೋರ್ವ ಪೊಲೀಸ್ ಪೇದೆ ಸೂರ್ಯಪ್ರಭಾ ಎಂಬುವವರು ಗಂಭೀರವಾಅಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular