ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಈ ದುರಂತ ಸಂಭವಿಸ್ದೆ. ಬೈಕ್ ಸವಾರ ಫಾಸರ್ (75) ಮೃತ ದುರ್ದೈವಿ. ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಬಸ್ ನ ಚಕ್ರ ಹರಿದು ಹೋಗಿದೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳುರಿನಿಂದ ಕೃಷ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಹಲಸೂರು ಗೇಟ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

