HomeLatest Newsಪ್ರವಾಸಕ್ಕೆ ಹೋಗಿದ್ದ ಸಾಫ್ಟ್ ವೇರ್ ಇಂಜಿನಿಯರ್ ಅಪಘಾತದಲ್ಲಿ ಸಾವು

ಪ್ರವಾಸಕ್ಕೆ ಹೋಗಿದ್ದ ಸಾಫ್ಟ್ ವೇರ್ ಇಂಜಿನಿಯರ್ ಅಪಘಾತದಲ್ಲಿ ಸಾವು

ಹೈದರಾಬಾದ್: ಪ್ರವಾಸಕ್ಕೆ ಹೋಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಯುವತಿ ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದಾರೆ.

ಆಂಧ್ರದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಗಹತದಲ್ಲಿ ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ ಸಾವನ್ನಪ್ಪಿದ್ದಾರೆ. ಕ್ಷಿಪ್ರಾ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳ ಜೊತೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು.

ಕಾರಿನಲ್ಲಿ ಹೋಗುತ್ತಿದ್ದಾಗ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕ್ಷಿಪ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಷಿಪ್ರಾ ನಿಟ್ಟೆ ಕಾಲೇಜಿನಲ್ಲಿ ಎಂಟೆಕ್ ವ್ಯಾಸಂಗ ಮಾಡಿದ್ದರು. ಅದಾಗಲೇ ತಂದೆಯನ್ನು ಕಳೆದುಕೊಂಡಿದ್ದ ಕ್ಷಿಪ್ರಾ, ತಾಯಿಗೆ ಶಸಹಿಕಲಾ ಅವರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮನೆಗೆ ಆಧಾರವಾಗಿದ್ದ ಮಗಳನ್ನು ಕಳೆದುಕೊಂಡಿರುವ ತಾಯಿ ಶಶಿಕಲಾ ಆಜ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular