HomeKarnatakaರಸ್ತೆ ದಾಟುವಾಗ ಭೀಕರ ಅಪಘಾತ: ಟಾಟಾ ಏಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು

ರಸ್ತೆ ದಾಟುವಾಗ ಭೀಕರ ಅಪಘಾತ: ಟಾಟಾ ಏಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆ ದಾಟುವಾಗ ಟಾಟಾ ಏಸ್ ವಾಹನ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ಕುಣಿಗಲ್ ಬೈಪಾಸ್ ಲ್ಯಾಂಕೋಟೋಲ್ ಬಳಿ ಈ ಅಪಘಾತ ಸಂಭವಿಸಿದೆ. ಮಾಗಡಿ ತಾಲೂಕಿನ ಮಾಯನಾಯಕನಹಳ್ಳಿ ಮೂಲದ ನಿವಾಸಿ ತೋಪೇಗೌಡ (42) ಮೃತ ದುರ್ದೈವಿ. ಘಟನೆ ಸಂಬಂಧ ಟಾಟ ಏಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ನಿ ಲಕ್ಷ್ಮಿ, ಮಕ್ಕಳು ವಿಮಲಾ, ಗಂಗರಂಗೇಗೌಡ ಜೊತೆಗೆ ಮಾಗಡಿ ತಾಲೂಕಿನ ಮಾಯನಾಯಕನಹಳ್ಳಿಯಲ್ಲಿ ವಾಸವಾಗಿದ್ದ ತೋಪೆಗೌಡ ಮನೆಗೆ ಆಧಾರ ಸ್ತಂಭವಾಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ರಸ್ತೆ ದಾಟಲು ಹೋಗಿ ಅಪಘಾತಕ್ಕಿಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತೋಪೇಗೌಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular