ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಟಾಟಾ ಏಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. 45 ವರ್ಷದ ಶೈಲಜಾ ಹಾಗೂ 26 ವರ್ಷದ ಪ್ರಜ್ವಲ್ ಮೃತ ತಾಯಿ-ಮಗ.
ದಿನಸಿ ಸಾಮಗ್ರಿಗಳನ್ನು ಖರೀದಿಸಿ, ತಾಯಿ-ಮಗ ಡಿಯೋ ಸ್ಕೂಟರ್ ನಲ್ಲಿ ಮನೆಯತ್ತ ಸಾಗುತ್ತಿದ್ದರು. ಈ ವೇಳೆ ಎದುರುನಿಂದ ಬಂದ ಟಾಟಾ ಏಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿತ್ತಿದ್ದಾರೆ.

