ಬೆಂಗಳೂರು: ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಏರ್ಪೋರ್ಟ್ ರಸ್ತೆಯ ಹುಣಸಮಾರನಹಳ್ಳಿ ಬಳಿ ನಡೆದಿದೆ.
ಸಿಟಿಗೆ ಪ್ರವೇಶವಿಲ್ಲ ಎಂದು ವಾಹನ ತಡೆದಿದ್ದಕ್ಕೆ ಗುದ್ದಿಕೊಂಡು ಹೋಗಲು ಚಾಲಕ ಯತ್ನ ನಡೆಸಿದ್ದು, ಘಟನೆಯಲ್ಲಿ ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ವಿಕಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗ್ಗೆ 7:30ರಿಂದ 11 ಗಂಟೆವರೆಗೆ ಏರ್ಪೋರ್ಟ್ ರಸ್ತೆಯಲ್ಲಿ ಗೂಡ್ಸ್ ವಾಹನಗಳಿಗೆ ನಿಷೇಧವಿದೆ. ಹೀಗಿದ್ದರೂ ಏರ್ಪೋರ್ಟ್ ಹೆದ್ದಾರಿಗೆ ಗೂಡ್ಸ್ ವಾಹನ ಎಂಟ್ರಿ ಕೊಟ್ಟಿತ್ತು. ಈ ವೇಳೆ ವಾಹನ ನಿಲ್ಲಿಸುವಂತೆ ಸೂಚನೆ ನೀಡಿದರೂ ಗೂಡ್ಸ್ ವಾಹನ ಚಾಲಕ ನಿಲ್ಲಿಸಿಲ್ಲ. ಪೊಲೀಸ್ ಕಾನ್ಸ್ ಟೇಬಲ್ ಗೆ ಗುದ್ದಿಕೊಂಡು ಹೋಗಿದ್ದಾನೆ.
ಗಂಭೀರ ಗಾಯಗೊಂಡ ವಿಕಾಸ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ್ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಆರೋಪಿ ಭರಕತ್ ಖಾನ್ ಪೊಲೀಸರು ಬಂಧಿಸಿದ್ದಾರೆ. ಗೂಡ್ಸ್ ವಾಹನವನ್ನೂ ಸೀಜ್ ಮಾಡಲಾಗಿದೆ.

