ಹಾಸನ: ಸೈಕಲ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿ ನಡೆದಿದೆ.
ಮಾಳೇಕೊಪ್ಪಲು ಬಳಿ ಮೇಲ್ಸೇತುವೆಯಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿ ಕಾಲೇಜಿಗೆ ಸೈಕಲ್ ನಲ್ಲಿ ತೆರಳುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
16 ವರ್ಷದ ಸಂಜು ಮೃತ ವಿದ್ಯಾರ್ಥಿ. ಹೊನ್ನಶಟ್ಟಿಹಳ್ಳಿ ಗ್ರಾಮದ ಗಿರೀಶ್ ಎಂಬುವವರ ಪುತ್ರ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

