HomeLatest NewsBREAKING: ಪ್ರವಾಸಿ ವಾಹನ ಡಿಕ್ಕಿ: ಸಹಕಾರಿ ಸಂಘದ ಮಹಿಳಾ ಸಿಬ್ಬಂದಿ ಸ್ಥಳದಲ್ಲೇ ಸಾವು

BREAKING: ಪ್ರವಾಸಿ ವಾಹನ ಡಿಕ್ಕಿ: ಸಹಕಾರಿ ಸಂಘದ ಮಹಿಳಾ ಸಿಬ್ಬಂದಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಪ್ರವಾಸಿ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಮಹಿಳಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ನವಮಿ (26) ಮೃತ ಮಹಿಳೆ. ಅಪಘಾತದ ಬಳಿಕ ವಾಹನ್ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಮೃತ ಮಹಿಳೆ ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ತುಮಕೂರು ಜಿಲ್ಲೆಯ ತಿಪಟೂರು ಮೂಲದ ವಾಹನ, ಮಹಿಳೆಗೆ ಡಿಕ್ಕಿ ಹೊಡೆದು ಹೋಗಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular