HomeKarnatakaBIG NEWS: ವಿಚಾರಣೆಗೆ ಹಾಜರಾಗಿದ್ದ ಆರೋಪಿ ಪೊಲೀಸರ ಕಣ್ಣೆದುರೇ ಕೋರ್ಟ್ ಆವರಣದಿಂದ ಪರಾರಿ

BIG NEWS: ವಿಚಾರಣೆಗೆ ಹಾಜರಾಗಿದ್ದ ಆರೋಪಿ ಪೊಲೀಸರ ಕಣ್ಣೆದುರೇ ಕೋರ್ಟ್ ಆವರಣದಿಂದ ಪರಾರಿ

ಬೆಳಗಾವಿ: ಆರೋಪಿಯೊಬ್ಬ ಪೊಲೀಸರ ಸಮ್ಮುಖದಲ್ಲೇ ಕೋರ್ಟ್ ಆವರಣದಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ನಡೆದಿದೆ.

ಅಬ್ದುಲ್ ಗನಿ ಶಬ್ಬೀರ್ ಶೇಕ್ ಪರಾರಿಯಾಗಿರುವ ಆರೋಪಿ. ಅಬ್ದುಲ್ ಶೇಕ್ ವಿರುದ್ಧ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಆರೋಪಿಯನ್ನು ಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು.

ಇಂದು ಕೋರ್ಟ್ ನಲ್ಲಿ ಆರೋಪಿಯ ವಿಚಾರಣೆ ಇದ್ದುದರಿಂದ ಪೊಲೀಸರು ಆರೋಪಿ ಅಬ್ದುಲ್ ಗನಿ ಶೇಕ್ ನನ್ನು ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕೋರ್ಟ್ ಆವರಣದಿಂದಲೇ ಆರೋಪಿ ಎಸ್ಕೇಪ್ ಆಗಿದ್ದಾನೆ. ಅಬ್ದುಲ್ ಗನಿ ಶೇಕ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular