ಅನಾರೋಗ್ಯಕ್ಕೀಡಾದ ಆರೋಪಿಗೆ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಜಾಮೀನು ನೀಡಬಹುದು ಎಂದು ಸಿಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್ ಎ) ಬಹಳ ಕಠಿಣವಾಗಿದ್ದರೂ ಆರೋಪಿ ಅನಾರೋಗ್ಯಕ್ಕೀಡಾದಾಗ ಆತನಿಗೆ ಈ ಕಾಯ್ದೆಯ ಅಡಿಯಲ್ಲಿ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸೇವಾ ವಿಕಾಸ ಸಹಕಾರ ಬ್ಯಾಂಕ್ ನ ಮಾಜಿ ಅಧ್ಯಕ್ಷ ಅಮರ್ ಸಾಧುರಾಮ್ ಮೂಲಚಂದಾನಿ ಅವರಿಗೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರು ಇರುವ ತ್ರಿಸದಸ್ಯ ಪೀಠ ವೈದ್ಯಕೀಯ ಕಾರಣಕ್ಕಾಗಿ ಜಾಮೀನು ಮಂಜೂರು ಮಾಡಿದೆ.

ಅಮರ್ 429 ಕೋಟಿ ಮೊತ್ತದ ಹಣದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದಾರೆ. ಅವರನ್ನು 2023 ರ ಜುಲೈ 1 ರಂದು ಬಂಧಿಸಲಾಗಿತ್ತು. ಆರೋಪಿ ವಿರುದ್ಧ ನಾಲ್ಕು ಎಫ್ ಐ ಆರ್ ಗಳು ಇವೆ. ಹಿರಿಯ ವಕೀಲ ಎ.ಎಸ್ ನಾಡಕರ್ಣಿ ಅವರು ಪೀಠದ ಗಮನಕ್ಕೆ ತಂದರು. ಅಮರ್ ಅವರು ಒಂದುವರ್ಷಕ್ಕೂ ಹೆಚ್ಚಿನ ಅವಧಿಯಿಂದ ಜೈಲಿನಲ್ಲಿದ್ದಾರೆ ಎಂಬುದನ್ನು ಪೀಠವು ದಾಖಲಿಸಿಕೊಂಡಿತು.

ಅಮರ್ ಅವರು ವೈದ್ಯಕೀಯ ಕಾರಣಕ್ಕಾಗಿ ತಮಗೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಆಗಸ್ಟ್ ನಲ್ಲಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅಮರ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್, ಆರೋಪಿ ಅನಾರೋಗ್ಯದಲ್ಲಿದ್ದರೆ ಜಾಮೀನು ನೀಡಬಹುದು ಎಂದು ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read