HomeIndiaಶಾಸಕನ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಆರೋಪಿ ಎನ್ ಕೌಂಟರ್ ನಲ್ಲಿ...

ಶಾಸಕನ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಆರೋಪಿ ಎನ್ ಕೌಂಟರ್ ನಲ್ಲಿ ಫಿನಿಶ್

ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನನ್ನು ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಜಿಲ್ಲಾ ಪೊಲೀಸರು ಪ್ರಯಾಗರಾಜ್‌ನ ನೆಹರು ಪಾರ್ಕ್‌ನಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಅರ್ಬಾಜ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2005ರ ಬಿಎಸ್‌ಪಿ ಶಾಸಕ ರಾಜುಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಶುಕ್ರವಾರ ಸಂಜೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪ್ರಯಾಗ್‌ ರಾಜ್‌ನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಹಿಂಬದಿಯ ಸೀಟಿನಿಂದ ಹೊರಬರುತ್ತಿದ್ದಾಗ ಉಮೇಶ್ ಪಾಲ್ ಅವರ ಮೇಲೆ ಫೈರಿಂಗ್ ಮಾಡಲಾಗಿತ್ತು. ಪಾಲ್ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದರು. ಪಾಲ್ ಅವರ ಶವಪರೀಕ್ಷೆ ವರದಿಯು 7 ಬಾರಿ ಗುಂಡು ಹಾರಿಸಲ್ಪಟ್ಟಿದೆ ಎಂದು ತಿಳಿಸಿದೆ.

ಹತ್ಯೆಯ ನಂತರ, ಉಮೇಶ್ ಪಾಲ್ ಅವರ ಪತ್ನಿ ಜಯ ಪಾಲ್ ಪ್ರಯಾಗ್ರಾಜ್ ಪೊಲೀಸರನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular