HomeLatest NewsBREAKING NEWS: ಹುಬ್ಬಳ್ಳಿ ಬಾಲಕಿ ಹತ್ಯೆಗೈದ ಆರೋಪಿ 'ಎನ್ ಕೌಂಟರ್'ಗೆ ಬಲಿ

BREAKING NEWS: ಹುಬ್ಬಳ್ಳಿ ಬಾಲಕಿ ಹತ್ಯೆಗೈದ ಆರೋಪಿ ‘ಎನ್ ಕೌಂಟರ್’ಗೆ ಬಲಿ

ಹುಬ್ಬಳ್ಳಿ: 5 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟೆಗೆ ಬಲಿಯಾಗಿದ್ದಾನೆ. ಎದೆಗೆ ಗುಂಡು ತಗುಲಿದ್ದರಿಂದ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ. ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ರಿತೇಶ್ ಕುಮಾರ್ ಬಲಿಯಾಗಿದ್ದಾನೆ.

ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದರು.

ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ ವೇಳೆ ಫೈರಿಂಗ್ ಮಾಡಲಾಗಿದೆ. ಎದೆಗೆ ಗುಂಡು ತಗುಲಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

35 ವರ್ಷದ ರಿತೇಶ್ ಕುಮಾರ್ ಹಲವಾರು ತಿಂಗಳಿನಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದ. ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪಿಎಸ್ಐ ಅನ್ನಪೂರ್ಣ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular