ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸುಮಾ ಎಸ್. ಸಾಹುಕಾರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಸುಮಾ ಎಸ್. ಸಾಹುಕಾರ್ ಅವರಿಗೆ ನಿರೀಕ್ಷಣ ಜಾಮೀನು ಮಂಜೂರು ಮಾಡಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಹುದ್ದೆಗೆ ಸಲ್ಲಿಸಿದ್ದ ಅರ್ಜಿಯನ್ನು ಜೂನ್ 24ರಂದೇ ಸುಮಾ ಹಿಂಪಡೆದುಕೊಂಡಿದ್ದಾರೆ. ದಾಖಲಾತಿಗಳ ಆಧಾರದಲ್ಲಿ ಆರೋಪ ಇರುವುದರಿಂದ ಬಂಧನ ಅಗತ್ಯವಿಲ್ಲ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ ಆಲಿಸಿದ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

