ಬೆಂಗಳೂರು: ರಾಜ್ಯದ ವಿವಿಧೆಡೆ ದಾಖಲಾದ 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಅಸ್ಲಾಂ(40) ಬಂಧಿತ ಆರೋಪಿ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಹಾವೇರಿ, ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಅಸ್ಲಾಂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಆರೋಪಿಯನ್ನು ಪತ್ತೆ ಹಚ್ಚಿ ವಾರೆಂಟ್ ಜಾರಿ ಮಾಡಲು ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
