BIG NEWS: ಆಸಿಡ್ ದಾಳಿ: ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ತಕ್ಷಣ ಈ ಹಣವನ್ನು ವಿದ್ಯಾರ್ಥಿನಿಯರ ಕುಟುಂಬಕ್ಕೆ ನೀಡಲಾಗುವುದು. ಅಲ್ಲದೇ ಸಂತ್ರಸ್ತರ ಚಿಕಿತ್ಸಾ ವೆಚ್ಚವನ್ನು ಸರ್ಕರವೇ ಭರಿಸಲಿದೆ ಎಂದು ಮಹಿಳಾ ಆಯೊಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದ ಮೂವರು ವಿದ್ಯಾರ್ಥಿನಿಯರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಸಾಮಾನ್ಯ ಚಿಕಿತ್ಸೆ ಬಳಿಕ ಪ್ಲಾಸ್ಟಿಕ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read