ಚಿಕ್ಕಬಳ್ಳಾಪುರ: ಮದುವೆಗೆ ನಿರಾಕರಿಸಿದ ಯುವತಿ ಮೇಲೆ ಸೋದರ ಮಾವನಿಂದಲೇ ಆಸಿಡ್ ದಾಳಿ ನಡೆದಿದೆ. ಬಳಿಕ ಸೋದರ ಮಾವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಆನಂದಕುಮಾರ್ ಯುವತಿ ಮನೆ ಎದುರಲ್ಲೇ ಆಸಿಡ್ ದಾಳಿ ಮಾಡಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಯುವತಿಯ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಸೋದರ ಮಾವ ಆನಂದಕುಮಾರ್ ಸ್ಥಿತಿ ಗಂಭೀರವಾಗಿದೆ. ಅದೃಷ್ಟವಶಾತ್ ವೈಶಾಲಿ(19) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನಂದಕುಮಾರ್ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.