HomeKarnatakaವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾರ್ಚ್ 5ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಪ್ರಮುಖ ಆರೋಪಿಯೊಂದಿಗೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರು ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದೆ.

ಆರೋಪಿ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಅದನ್ನು ಹೊಲಿದುಕೊಟ್ಟ ವ್ಯಕ್ತಿ, ಆಸಿಡ್ ನೀಡಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular