ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಕನ್ನಡಿಗರು ಸೇರಿ ೨೮ ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಪಾಕಿಸ್ತಾನ ಪ್ರಜೆಗಳು ಭಾರತ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅನಧಿಕ್ರಿತವಾಗಿ ನೆಲೆಸಿರುವ ಪಾಕ್ ಪ್ರಜೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಅನಧಿಕೃತವಾಗಿ ಪಾಕಿಸ್ತಾನ ಪ್ರಜೆಗಳು ನೆಲೆಸಿದ್ದರೆ ಕ್ರಮ ಕೈಗೊಳ್ಳಲಾಗುವುದು. ಸ್ಲೀಪರ್ ಸೆಲ್ ಗಳ ಪತ್ತೆಕಾರ್ಯ ನಡೆಯುತ್ತಿದೆ. ಸ್ಲೀಪರ್ ಸೆಲ್ ಗಳು ಪತ್ತೆಯಾದರೆ ಎನ್ ಐಎ ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ದೇಶದ ಭದ್ರತೆ ವಿಚಾರವಾಗಿ ಕೇಂದ್ರ ಸರ್ಕಾರ ಈ ನಿರ್ಧರಾ ಕೈಗೊಂಡಿದೆ. ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ನಿರ್ಧಾರಗಳನ್ನೂ ಕೈಗೊಳ್ಳಬಹುದು. ಕೇಂದ್ರ ಸರ್ಕಾರದ ನಿರ್ಧಾರಗಳ ಬಗ್ಗೆ ಮಾತನಾಡಲ್ಲ ಎಂದು ಹೇಳಿದರು.