BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಹಾವಳಿಗೆ ಕ್ರಮ : ‘CM ಸಿದ್ದರಾಮಯ್ಯ’ ನೇತೃತ್ವದ ಸಭೆಯ ಹೈಲೆಟ್ಸ್ ಹೀಗಿದೆ.!

ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

•ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲಾಗುವುದು. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.

• ಕಾಯ್ದೆ ಸಂಪೂರ್ಣ ಸಂವಿಧಾನ ಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. •ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುವುದು.

•ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್ಮೆನ್ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗುವಂತೆ ಕಾನೂನು ರೂಪಿಸಲಾಗುವುದು.

•ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುವುದು.

•ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ತಾತ್ಕಾಲಿಕವಾಗಿ ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು, ಸಂತ್ರಸ್ತರು ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read