‘ಏಷ್ಯನ್ ಗೇಮ್ಸ್’ ನಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಸರ್ಕಾರಿ ಹುದ್ದೆಯಲ್ಲಿ 3 % ಮೀಸಲಾತಿಗೆ ಕ್ರಮ : ಸಚಿವ ಬಿ.ನಾಗೇಂದ್ರ

ಮೈಸೂರು : ಚೀನಾದ ಹಾಂಗ್ ಝೋ ನಲ್ಲಿ ಇತ್ತೀಚೆಗೆ ನಡೆದ 19 ನೇ ಏಷ್ಯಾಡ್ ಕ್ರೀಡಾ ಕೂಡದಲ್ಲಿ ಶತಕ ಪದಕ ಗಳಿಸಿ ಕೀರ್ತಿ ಪತಾಕೆ ಹಾರಿಸಿದ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದ ಸನ್ಮಾನ ಮಾಡಲಾಗುತ್ತದೆ ಕ್ರೀಡಾ ಸಚಿವ ಬಿ ನಾಗೇಂದ್ರ ಹೇಳಿದರು.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟದಲ್ಲಿ ಮಾತನಾಡಿದ ಸಚಿವರು
ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಈ ಕ್ರೀಡಾಪಟುಗಳನ್ನು ಸನ್ಮಾನಿಸಿ ಅವರಿಗೆ ಪ್ರೋತ್ಸಾಹಧನ ನೀಡಲಾಗುವುದು. ಪದಕ ಪಡೆದ ಕ್ರೀಡಾಪಟು ಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೊಸ ಕ್ರೀಡಾಪ್ರತಿಭೆಗ ಳನ್ನು ಗುರುತಿಸಿ, ಅವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರದಿಂದ ಹಲವು ಯೋಜನೆಗಳನ್ನು ಕೈಗೊಳ್ಳಲಾಗುವುದು, ಕ್ರೀಡಾ ಸಚಿವನಾಗಿ ನಾನು ನನ್ನ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಹೇಳಿದರು. ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತ 100 ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read