HomeLatest NewsBIG NEWS : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ : ಸಚಿವ ಭೈರತಿ ಸುರೇಶ್

BIG NEWS : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ : ಸಚಿವ ಭೈರತಿ ಸುರೇಶ್

ಬೆಳಗಾವಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಭೈರತಿ ಸುರೇಶ್ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಉತ್ತರಿಸಿದರು.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದ್ದು, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಚಿವ ಭೈರತಿ ಸುರೇಶ್ ಹೇಳಿದರು
ಆಕ್ಷೇಪಣೆ / ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular