HomeKarnatakaBIG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ 'ಸರ್ಕಾರಿ ವೈದ್ಯಕೀಯ ಕಾಲೇಜು' ಆರಂಭಕ್ಕೆ ಕ್ರಮ :...

BIG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಸರ್ಕಾರಿ ವೈದ್ಯಕೀಯ ಕಾಲೇಜು’ ಆರಂಭಕ್ಕೆ ಕ್ರಮ : ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಇಂದು ಕಲಾಪದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಪ್ರತಿ ಜಿಲ್ಲೆಗಳಲ್ಲೂ ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸರ್ಕಾರದ ನೀತಿಗೆ ಅನುಗುಣವಾಗಿ 24 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಹಣಕಾಸು ಸ್ಥಿತಿಗತಿ ನೋಡಿಕೊಂಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಸಚಿವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular