Free Bus Travel: ‘ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸದಿದ್ದರೆ ಕಠಿಣ ಕ್ರಮ’; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

 

ಬೆಂಗಳೂರು : ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯರವರು ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ನಾಳೆ 1 ಗಂಟೆಯಿಂದ ಉಚಿತ ಬಸ್ ಸೇವೆ ನೀಡಲಿದ್ದು, ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲು ಎಂಡಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ನಿಲುಗಡೆ ಪ್ರದೇಶಗಳಲ್ಲಿ ಕಡ್ಡಾಯವಾಗಿ ಚಾಲಕರು ಬಸ್ ನಿಲ್ಲಿಸಬೇಕು ಎಂದರು. ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುತ್ತೇವೆ. ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳು ಕಾಲವಕಾಶ ಇದೆ ಎಂದರು.

ನಾಳೆ ಮಧ್ಯಾಹ್ನ 12 ಗಂಟೆಗೆ ‘ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ಸಿಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕಾರ್ಯಕ್ರಮಕ್ಕೆ ಹಾಜರ್ ಆಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read