ಶಿವಮೊಗ್ಗ : ರಾಜ್ಯಾದ್ಯಂತ 16, 000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
025-26ನೇ ಸಾಲಿನಲ್ಲಿ ಪ್ರಥಮ ಬಾರಿಗೆ ರಾಜ್ಯದ 5000 ಸರ್ಕಾರಿ ಶಾಲೆಗಳಲ್ಲಿ ಎಲ್ಜಿ & ಯುಕೆಜಿ ತರಗತಿಗಳು, 4000 ಸರ್ಕಾರಿ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳನ್ನು ಹಾಗೂ ರಾಜ್ಯದಲ್ಲಿ 500 ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ 25000 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಎನ್ಇಇಟಿ/ಜೆಇಇ/ಸಿಇಟಿ ತರಬೇತಿ ನೀಡಲಾಗುತ್ತಿದೆ. ಸದರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು 2024-25ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯು ಐಐಟಿ ಖರಗುರ ಗೆ ಪ್ರವೇಶಾತಿ ಪಡೆದಿರುವುದು ಶಿಕ್ಷಣ ಸಚಿವನಾಗಿ ನನಗೆ ಹೆಮ್ಮಯ ವಿಷಯವಾಗಿದೆ
ಗೃಹಲಕ್ಷ್ಮಿಯೋಜನೆಯಿಂದ ಜಿಲ್ಲೆಯ 3,87,638 ಫಲಾನುಭವಿಗಳಿಗೆ ರೂ. 1567.74 ಕೋಟಿಗಳನ್ನು ಡಿಬಿಟಿ ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ.ಶಕ್ತಿ ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 6.32 ಕೋಟಿ ಮಹಿಳಾ ಪ್ರಯಾಣಿಕರು ಇದುವರೆಗೆ ಪ್ರಯಾಣಿಸಿ, ಈ ಯೋಜನೆಯ ಲಾಭಪಡೆದಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಈ ವರೆಗೆ ಜಿಲ್ಲೆಯಲ್ಲಿ 3,52,840 ಲಕ್ಷ ಪಡಿತರ ಕಾರ್ಡುದಾರರಿಗೆ ರೂ. 359.97 ಕೋಟಿ ಹಣವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗಿದೆ.ಈ ವರ್ಷದ ಫೆಬ್ರವರಿಯಿಂದ 10ಕೆಜಿ ಅಕ್ಕಿಯನ್ನು ಪಡಿತರ ಚೀಟಿದಾರರಿಗೆ ನೀಡಲಾಗುತ್ತಿದೆ.
ಗೃಹ ಜ್ಯೋತಿ ಯೋಜನೆಯಡಿ ಇದುವರೆವಿಗೂ 4.69 ಲಕ್ಷ ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು, ಸರ್ಕಾರ ವಿದ್ಯುತ್ ಸಬ್ಸಿಡಿಗಾಗಿ ಮೊತ್ತ ರೂ. 481.04 ಕೋಟಿ ವೆಚ್ಚ ಮಾಡಲಾಗಿದೆ.ಶಿವಮೊಗ್ಗದಿಂದಲೇ ಯುವನಿಧಿ ಯೋಜನೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರು ಚಾಲನೆ ನೀಡಿದರು.
ಇದುವರೆವಿಗೂ ಈ ಯೋಜನೆಯಡಿ ಜಿಲ್ಲೆಯ 6894 ವಿದ್ಯಾರ್ಥಿಗಳಿಗೆ ರೂ.17.88 ಕೋಟಿಯನ್ನು ಅವರ ಖಾತೆಗಳಿಗೆ ಜಮಾಮಾಡಲಾಗಿದೆ.ಈ ಬಾರಿ ಉತ್ತಮ ಮಳೆಯಿಂದಾಗಿ ಜಿಲ್ಲೆಯ ಕೆರೆ, ಕಾಲುವೆಗಳಲ್ಲಿ ನೀರು ತುಂಬಿ, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ. ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಜಿಲ್ಲೆಗೆ ನೂತನವಾಗಿ 5 ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.
ಮತ್ಸ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಮಹಿಳಾ ಮೀನುಗಾರರಿಗೆ ಉಚಿತ ಮೀನು ಮರಿ ಮತ್ತು ಮೀನಿನ ಆಹಾರ ವಿತರಣೆ ಹಾಗೂ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಮೀನುಗಾರರ ಕುಟುಂಬಗಳಿಗೆ 25 ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದರು.