HomeEntertainmentBIG NEWS: ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್; ಅಚ್ಚರಿ ಮೂಡಿಸಿದ ಬೆಳವಣಿಗೆ

BIG NEWS: ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಂಡ್ಯ; ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಟ ದರ್ಶನ್ ಇಂದು ಚುನಾವಣಾ ಪ್ರಚಾರಕ್ಕೆ ಇಳಿದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಪರವಾಗಿ ಪ್ರಚಾರ ಮಾಡಿ, ತಾನು ಸುಮಲತಾ ಅವರ ಎರಡನೇ ಮಗ ಇದ್ದಂತೆ ಎಂದು ಹೇಳಿದ್ದರು. ಅಮ್ಮನ ನಿರ್ಧಾರಕ್ಕೆ ನಮ್ಮ ಬೆಂಬಲ ಎಂದಿದ್ದರು. ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಈ ನಡುವೆ ಬಿಜೆಪಿ ಸೇರಿದ್ದ ಸುಮಲತಾ, ಪಕ್ಷ ಹೇಳಿದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಆದರೆ ಈವರೆಗೂ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ನಡೆಸಿಲ್ಲ.

ಈ ಬೆಳವಣಿಗೆಗಳ ನಡುವೆ ಇಂದು ನಟ ದರ್ಶನ್ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿಯ ಪರವಾಗಿ ದರ್ಶನ್ ಪ್ರಚಾರ ನಡೆಸುವ ನಿರೀಕ್ಷೆ ಇತ್ತು. ಆದರೆ ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಪ್ರಚಾರಕ್ಕೆ ಇಳಿದಿರುವುದು ಅಚ್ಚರಿಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular