HomeEntertainmentವಯನಾಡು ದುರಂತಕ್ಕೆ ಮಿಡಿದ ನಟ ಅಲ್ಲು ಅರ್ಜುನ್ ; ಸಿಎಂ ಪರಿಹಾರ ನಿಧಿಗೆ 25 ಲಕ್ಷ...

ವಯನಾಡು ದುರಂತಕ್ಕೆ ಮಿಡಿದ ನಟ ಅಲ್ಲು ಅರ್ಜುನ್ ; ಸಿಎಂ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ.!

ವಯನಾಡು ದುರಂತಕ್ಕೆ ಮಿಡಿದ ನಟ ಅಲ್ಲು ಅರ್ಜುನ್ ; ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ
ಕೇರಳ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಾವಿನ ಸಂಖ್ಯೆ 350 ರ ಗಟಿ ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಭೂ ಕುಸಿತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಹಲವು ನಟ, ನಟಿಯರು ಈ ದುರಂತದ ಪರಿಹಾರಕ್ಕೆ ದೇಣಿಗೆ ನೀಡಿದ್ದಾರೆ. ಇದೀಗ ನಟ ಅಲ್ಲು ಅರ್ಜುನ್ ಕೇರಳ ಸಹಾಯಕ್ಕೆ ಮುಂದಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಈ ಘಟನೆಗೆ ಮಿಡಿದ ರಶ್ಮಿಕಾ ಮಂದಣ್ಣ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ಸೆಲೆಬ್ರೆಟಿಗಳು ವಯನಾಡು ದುರಂತಕ್ಕೆ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ತಮಿಳು ನಟ ವಿಕ್ರಮ್ ಈಗಾಗಲೇ 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಒಟ್ಟಿನಲ್ಲಿ ಸಿನಿಮಾ ನಟರು ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಮಿಡಿಯುವ ಮೂಲಕ ನಿಜ ಜೀವನದಲ್ಲಿ ಕೂಡ ರಿಯಲ್ ಹೀರೋ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular