HomeKarnatakaಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 1 ತಿಂಗಳು |Actor Darshan Arrested

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 1 ತಿಂಗಳು |Actor Darshan Arrested

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 1 ತಿಂಗಳು ಆಗಿದ್ದು, ಜೈಲಿನಲ್ಲಿ ದಾಸ ಚಡಪಡಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೂನ್ 11 ರಂದು ಬಂಧನಕ್ಕೊಳಗಾಗಿದರು. ಅಂದಿನಿಂದ ಇಂದಿನವರೆಗೂ ದರ್ಶನ್ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.

ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ ಮಗ ಹಾಗೂ ಹೆಂಡತಿಯನ್ನು ಕಂಡು ದರ್ಶನ್ ಖುಷಿಯಾಗಿದ್ದರು. ಇದಾದ ಬಳಿಕ ನಟ ದರ್ಶನ್ ಮತ್ತೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 2023 ನವೆಂಬರ್ ನಿಂದ 2024 ಅಕ್ಟೋಬರ್ ವರೆಗೆ ಅವರ ಕುಜ ಭುಕ್ತಿ ಇದೆ. ಅಕ್ಟೋಬರ್ ನಂತರ ಅವರ ಜೀವನ ಚೇಂಜ್ ಆಗುತ್ತದೆ. ಅಕ್ಟೋಬರ್ 28 ರವರೆಗೆ ಅವರಿಗೆ ಜಾಮೀನು ಸಿಗಲ್ಲ. ಆಮೇಲೆ ಅವರ ಜೀವನ ಬದಲಾಗುತ್ತದೆ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular