BREAKING : ಪೊಲೀಸ್ ಠಾಣೆ ಮುಂದೆ ಕೂಗಾಡಿ ನಟ ದರ್ಶನ್ ಫ್ಯಾನ್ಸ್ ಗಲಾಟೆ , ಪೊಲೀಸರಿಂದ ಲಾಠಿಚಾರ್ಜ್..!

ಬೆಂಗಳೂರು : ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಮುಂದೆ ನಿನ್ನೆಯಿಂದಲೂ ನಟ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದರು.  ಅಲ್ಲದೇ ಇಂದು ಠಾಣೆ ಎದುರು ದರ್ಶನ್ ಫ್ಯಾನ್ಸ್ ಕೂಗಾಡಿ ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಲಾಠಿ ರುಚಿ ತೋರಿಸಿ ಸ್ಥಳದಿಂದ ಓಡಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು 12 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೊಲೆ ನಡೆದ ಸ್ಥಳ ಪಟ್ಟಣಗೆರೆ ಶೆಡ್ ಗೆ ಆರೋಪಿಗಳನ್ನು ಕರೆದೊಯ್ದು ಪೊಲೀಸರು ಇಂದು ಸ್ಥಳ ಮಹಜರು ನಡೆಸಲಿದ್ದಾರೆ. ಈ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read