HomeEntertainmentರೇಣುಕಾಸ್ವಾಮಿ ಕೊಲೆ ಆಧರಿತ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ತಂದ ನಟ ದರ್ಶನ್

ರೇಣುಕಾಸ್ವಾಮಿ ಕೊಲೆ ಆಧರಿತ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ತಂದ ನಟ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿತವೆನ್ನಲಾದ ‘ಬಾಸ್’ ಚಿತ್ರ ಬಿಡುಗಡೆಗೆ ನಟ ದರ್ಶನ್ ತಡೆಯಾಜ್ಞೆ ತಂದಿದ್ದಾರೆ.

ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾರಿತ ಎನ್ನಲಾದ ಕನ್ನಡದ ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶ ನೀಡಿದೆ. ‘ಬಾಸ್’ ಸಿನಿಮಾ ಬಿಡುಗಡೆ ಮಾಡದಂತೆ ಚಿತ್ರದ ನಿರ್ಮಾಪಕರು, ನಿರ್ದೇಶಕರು, ವಿತರಕರು ಮತ್ತು ಪ್ರದರ್ಶಕರಿಗೆ ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ್ದ ಮೂಲ ದಾವೆ ವಿಚಾರಣೆ ನಡೆಸಿದ ನಗರದ 16ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ನೀಡಿದೆ.

ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಧರಿಸಿದ ಅಥವಾ ದಾವೆದಾರರ ಜೀವನ ಉಲ್ಲೇಖಿಸುವಂತಹ ಅವರ ಜೀವನಕ್ಕೆ ಸಂಬಂಧಿಸಿದ ಅವರ ಕುಟುಂಬ ಮತ್ತು ಗೌರವಕ್ಕೆ ತೇಜೋವಧೆ ಉಂಟು ಮಾಡುವಂತಹ ವಿವಾದಿತ ‘ಬಾಸ್’ ಚಿತ್ರವನ್ನು ಚಿತ್ರಮಂದಿರ ಅಥವಾ ಒಟಿಟಿ ಮೂಲಕ ಬಿಡುಗಡೆ ಮಾಡಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದ ನಿರ್ಮಾಪಕರು, ನಿರ್ದೇಶಕರಿಗೆ ಸಮನ್ಸ್ ಜಾರಿಗೊಳಿಸಿ ದಾವೆ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಲಾಗಿದೆ. 2024ರ ಏಪ್ರಿಲ್ 14ರಂದು ‘ಬಾಸ್’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಸಿದ್ಧವಾಗಿತ್ತು. ಈ ಚಿತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿಸಿದೆ. ಸಿನಿಮಾ ಬಿಡುಗಡೆಯಾದರೆ ತಮ್ಮ ಘನತೆ ಗೌರವಕ್ಕೆ ಧಕ್ಕೆಯಾಗುತ್ತದೆ. ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಅಡ್ಡಿಯಾಗುತ್ತದೆ. ಹೀಗಾಗಿ ಸಿನಿಮಾ ಬಿಡುಗಡೆ ಮಾಡದಂತೆ ಆದೇಶಿಸಬೇಕೆಂದು ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ನ್ಯಾಯಾಲಯಕ್ಕೆ ದಾವೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular