ಬೆಂಗಳೂರು : ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದು, ಕೋರ್ಟ್ ಅನುಮತಿ ನೀಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ. 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ.
ದುಬೈ ಮತ್ತು ಯೂರೂಪ್ ಗೆ ತೆರಳಲು ಅವಕಾಶ ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ನೀಡುವಾಗ ಬೆಂಗಳೂರು ಬಿಡುವಂತಿಲ್ಲ ಎಂದು ಹೈಕೋರ್ಟ್ ಷರತ್ತು ವಿಧಿಸಿತ್ತು. ಸಿ ಆರ್ ಪಿಸಿ ಸೆಕ್ಷನ್ 439 (1) (ಬಿ) ಅಡಿ ನಟ ದರ್ಶನ್ ಸಲ್ಲಿಸಿದ್ದು, ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
You Might Also Like
TAGGED:ನಟ ದರ್ಶನ್