ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸೇರಿದಂತೆ, ಐದು ಮಂದಿಗೆ ವಿಚಾರಣಾಧೀನ ಕೈದಿ ಸಂಖ್ಯೆಗಳನ್ನು ಜೈಲಾಧಿಕಾರಿಗಳು ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ 7313, ಎ2 ಆರೋಪಿ ದರ್ಶನ್ ಅವರಿಗೆ 7314 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ.
ಎ11 ಆರೋಪಿ ಆರ್. ನಾಗರಾಜ್ 7315, ಎ12 ಆರೋಪಿ ಎಂ. ಲಕ್ಷ್ಮಣ್ ಗೆ 7316, ಪ್ರದೋಶ್ ಅವರಿಗೆ 7317 ವಿಚಾರಣಾ ಕೈದಿ ಸಂಖ್ಯೆ ನೀಡಲಾಗಿದೆ. ಇದೇ ಪ್ರಕರಣದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಬಂಧಿಸಿದ ಸಂದರ್ಭದಲ್ಲಿ ದರ್ಶನ್ ಗೆ ಕೈದಿ ಸಂಖ್ಯೆ 6106 ನೀಡಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾದ ಬಳಿಕ ಕೈದಿ ಸಂಖ್ಯೆ 511 ನೀಡಲಾಗಿತ್ತು.