BIG NEWS : ನಟ ದರ್ಶನ್ ಗೆ ಶಿಕ್ಷೆ ಆದರೆ ಕನ್ನಡ ಚಿತ್ರರಂಗಕ್ಕೆ ನಷ್ಟ ಆಗುತ್ತದೆ : ಫಿಲ್ಮ್ ಚೇಂಬರ್ ಅಧ್ಯಕ್ಷ N.M ಸುರೇಶ್

ಬೆಂಗಳೂರು : ನಟ ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗುತ್ತದೆ, ಶಿಕ್ಷೆ ಆದರೆ   ಕನ್ನಡ ಚಿತ್ರರಂಗಕ್ಕೆ ನಷ್ಟ ಆಗುತ್ತದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ.

ದರ್ಶನ್ ಪ್ರಕರಣದ ಕುರಿತು ಮಾತನಾಡಿರುವ ಅವರು ನಟ ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗುತ್ತದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ಸೆಲೆಬ್ರಿಟಿ ಆದ ಮೇಲೆ  ಪರಪ್ಪನ ಅಗ್ರಹಾರದಲ್ಲಿ  ಜೈಲಿನಲ್ಲಿ ದರ್ಶನ್ ಜವಾಬ್ದಾರಿಯಿಂದ ಇರಬೇಕಿತ್ತು. ನಟ ದರ್ಶನ್ ಗೆ ಶಿಕ್ಷೆ ಆದರೆ ಸ್ಯಾಂಡಲ್ ವುಡ್ ಗೆ ನಷ್ಟ ಆಗುತ್ತದೆ, ಮುಂದೆ ಏನಾಗುತ್ತದೆ ಎಂಬುದನ್ನು ಈಗಲೇ ಹೇಳೋದಕ್ಕೆ ಆಗಲ್ಲ ಎಂದು ಅವರು ಹೇಳಿದರು.

ಕಳೆದ ಕೆಲವು ತಿಂಗಳ ಹಿಂದೆ ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ 5 ಲಕ್ಷ ಪರಿಹಾರದ ಚೆಕ್ ಕೂಡ ವಿತರಿಸಿತ್ತು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read