HomeLatest Newsನಟ ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರ

ನಟ ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ.

 ಜಾಮೀನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿ ಮಂಗಳವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಹೀಗಾಗಿ ದರ್ಶನ್ ಗೆ ಮತ್ತೆ ಟೆನ್ಶನ್ ಶುರುವಾಗಿದೆ. ಕಳೆದ ಗುರುವಾರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿತ್ತು.

2024ರ ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಆರು ತಿಂಗಳ ಬಳಿಕ 2024 ಡಿಸೆಂಬರ್ 13ರಂದು ಹೈಕೋರ್ಟ್ ಜಾಮೀನು ನೀಡಿತ್ತು. 7 ಮಂದಿಗೆ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular