ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ನಾಳಿನ ಕೇಸ್ ಗಳ ಪಟ್ಟಿಯಲ್ಲಿ ದರ್ಶನ್ ಕೇಸ್ ಲಿಸ್ಟ್ ಆಗಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರ ಪೀಠದಲ್ಲಿ ಹೆಚ್ಚುವರಿ ಲಿಸ್ಟ್ ನಲ್ಲಿ ಮೂರನೇ ಪ್ರಕರಣವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡುವ ಸಾಧ್ಯತೆ ಇದೆ.
ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿರುವುದನ್ನು ಸರ್ಕಾರ ಪ್ರಶ್ನಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈಗಾಗಲೇ ವಾದ ಪ್ರತಿವಾದವನ್ನು ಆಲಿಸಿರುವ ಸುಪ್ರೀಂ ಕೋರ್ಟ್ ನಾಳೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.