BREAKING : ನಟಿ ರಮ್ಯಾಗೆ ಮೆಸೇಜ್ ಮಾಡಿ ಕೇಸ್ ಹಿಂಪಡೆಯುಂತೆ ನಟ ದರ್ಶನ್ ಅಭಿಮಾನಿಗಳಿಂದ ಒತ್ತಡ.!

ಬೆಂಗಳೂರು : ನಟಿ ರಮ್ಯಾಗೆ ಮೆಸೇಜ್ ಮಾಡಿ ಕೇಸ್ ಹಿಂಪಡೆಯುಂತೆ ನಟ ದರ್ಶನ್ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ಅಶ್ಲೀಲ ಮೆಸೇಜ್ ವಿಚಾರಕ್ಕೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ, 43 ಖಾತೆಗಳ ವಿರುದ್ಧ ರಮ್ಯಾ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ನಟಿ ರಮ್ಯಾಗೆ ಮೆಸೇಜ್ ಮಾಡಿ ಕೇಸ್ ಹಿಂಪಡೆಯುಂತೆ ನಟ ದರ್ಶನ್ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ .ಇನ್ಮುಂದೆ ಇಂತಹ ಮೆಸೇಜ್ ಮಾಡಲ್ಲ, ಕೇಸ್ ವಾಪಸ್ ತೆಗೆದುಕೊಳ್ಳಿ ಎಂದು ಮೆಸೇಜ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸುತ್ತಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಈ ಕುರಿತಾಗಿ ನಟಿ ರಮ್ಯಾ ಅವರು 43 ಖಾತೆಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಗೆ ರಮ್ಯಾ 4 ಪುಟಗಳ ದೂರು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು, ಅಪರಾಧ ವಿಭಾಗದ ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಎಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ರಮ್ಯಾ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read