ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
“ಡೆವಿಲ್” ಸಿನಿಮಾ ಪ್ರಚಾರದ ವೇಳೆ ವಿಜಯಲಕ್ಷ್ಮೀ ವಿರುದ್ಧ ಅಸಭ್ಯ ಕಾಮೆಂಟ್ಗಳನ್ನು ಮಾಡಿದ್ದ ಆರೋಪದ ಮೇಲೆ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಆರೋಪಿಗಳ ನಡೆ ಮಹಿಳೆಯ ಘನತೆಗೆ ಧಕ್ಕೆ ತರುವಂತದ್ದು ಎಂದು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಕೃತ್ಯಗಳನ್ನು ಕ್ಷಮಿಸಲಾಗದು ಎಂದು ಅಭಿಪ್ರಾಯಪಟ್ಟಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವ ರೀತಿಯ ಪೋಸ್ಟ್ಗಳು ಕಾನೂನುಬಾಹಿರವಾಗಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಮಿತಿಯಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಈ ಪ್ರಕರಣದಲ್ಲಿ ಆರೋಪಿ ನಾಲ್ವರಿಗೆ ಜಾಮೀನು ನೀಡುವುದನ್ನು ನ್ಯಾಯಾಲಯ ನಿರಾಕರಿಸಿದೆ.
ಬಂಧಿತ ಆರೋಪಿಗಳು ತಮ್ಮ ವಿರುದ್ಧ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯ ಹೇಳಿಕೆಗಳು ಹಾಗೂ ಕಾಮೆಂಟ್ಗಳು ಗಂಭೀರ ಅಪರಾಧವಾಗುತ್ತವೆ ಎಂದು ಅಭಿಪ್ರಾಯಪಟ್ಟಿದೆ.
ನ್ಯಾಯಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯವು ಮೂಲಭೂತ ಹಕ್ಕಾಗಿದ್ದರೂ ಅದು ಮಿತಿಯೊಳಗೇ ಇರಬೇಕು ಎಂದು ಸ್ಪಷ್ಟಪಡಿಸಿದೆ. ಯಾರಾದರೂ ವ್ಯಕ್ತಿಯ ವೈಯಕ್ತಿಕ ಜೀವನ, ಗೌರವ ಅಥವಾ ಮಹಿಳೆಯ ಘನತೆಗೆ ಧಕ್ಕೆ ತರುವ ರೀತಿಯ ಕಾಮೆಂಟ್ಗಳನ್ನು ಮಾಡುವುದು ಕಾನೂನುಬಾಹಿರ ಎಂದು ಹೇಳಿದೆ.
ಸೈಬರ್ ಕ್ರೈಂ ಪೊಲೀಸರು ದಾಖಲಿಸಿದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಆರೋಪಿಗಳ ವಿರುದ್ಧ ಸಾಕಷ್ಟು ಪ್ರಾಥಮಿಕ ಸಾಕ್ಷ್ಯಗಳು ಇರುವುದಾಗಿ ನ್ಯಾಯಾಲಯ ಗಮನಿಸಿದೆ. ಈ ಹಿನ್ನಲೆಯಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.
ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಈಗಲೂ ನ್ಯಾಯಾಂಗ ಬಂಧನದಲ್ಲಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಅಥವಾ ಅವಮಾನಕಾರಿ ಪೋಸ್ಟ್ಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

