ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ‘ಮಾರ್ಟಿನ್ ‘ಚಿತ್ರದ ಟ್ರೇಲರ್ ರಿಲೀಸ್ |Watch Trailer

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಮಾರ್ಟಿನ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.
ತನ್ನ ಟೀಸರ್ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ.

ಎಪಿ ಅರ್ಜುನ್ ನಿರ್ದೇಶನದ ಈ ಚಿತ್ರದಲ್ಲಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ಸುಕೃತ ವಾಗ್ಲೆ, ಅಚ್ಯುತ್ ಕುಮಾರ್, ಅನ್ವೇಶಿ ಜೈನ್, ಚಿಕ್ಕಣ್ಣ, ಸಾಧುಕೋಕಿಲ, ಮಾಳ್ವಿಕಾ ಅವಿನಾಶ್ ಬಣ್ಣ ಹಚ್ಚಿದ್ದಾರೆ. ಉದಯ್ ಮೆಹ್ತಾ ತಮ್ಮ ವಾಸವಿ ಎಂಟರ್ಪ್ರೈಸಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಪೊಗರು’ ಚಿತ್ರದ ನಂತರ ಎ.ಪಿ. ಅರ್ಜುನ್ ನಿರ್ದೇಶನದ ಹೊಸ ಚಿತ್ರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ‘ಪೊಗರು’ ಚಿತ್ರಕ್ಕಿಂತ ವಿಭಿನ್ನವಾದ ಹೇರ್ ಸ್ಟೈಲ್ ಮತ್ತು ಲುಕ್ ನಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಮಾರ್ಟಿನ್’ ಅ.11 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ.

https://www.youtube.com/watch?v=85uL3yi5txc

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read