BREAKING : ನಟ ಡಾ.ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್ ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇನ್ನಿಲ್ಲ

ಬೆಂಗಳೂರು : ದಿವಂಗತ ನಟ ಡಾ.ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್ ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ . ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಡಾ.ವಿಷ್ಣುವರ್ಧನ್ ಆಪ್ತರಾಗಿದ್ದ ಅವರು ವಿಷ್ಣುವರ್ಧನ್ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೂಡ ಕೆಲಸ ಮಾಡಿದ್ದರು. ಗಾಡ್ ಫಾದರ್, ಆಪ್ರಮಿತ್ರ, ಆಪ್ತರಕ್ಷಕ, ಹೃದಯವಂತ, ನೀನು ನಕ್ಕರೆ ಹಾಲು ಸಕ್ಕರೆ, ರವಿವರ್ಮ, ಏಕದಂತ, ಸೇರಿದಂತೆ ವಿಷ್ಣುವರ್ಧನ್ ಅವರ ಹಲವು ಸಿನಿಮಾಗಳಿಗೆ ಇವರು ಸಂಭಾಷಣೆ ಬರೆದು ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read