ಬೆಂಗಳೂರು : ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ನಾಳೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.
ಹೌದು. ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸಿಎಂ ಕೂಡ ಸಕರಾತ್ಮವಾಗಿ ಸ್ಪಂದಿಸಿದ್ದು, ಪ್ರಶಸ್ತಿ ಘೋಷಣೆ ಬಗ್ಗೆ ಭರವಸೆ ನೀಡಿದ್ದಾರೆ. ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

