HomeEntertainment50ನೇ ವಸಂತಕ್ಕೆ ಕಾಲಿಟ್ಟ ನಟ ದುನಿಯಾ ವಿಜಯ್

50ನೇ ವಸಂತಕ್ಕೆ ಕಾಲಿಟ್ಟ ನಟ ದುನಿಯಾ ವಿಜಯ್

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಂದೆ – ತಾಯಿ ಸಮಾಧಿಯ ಬಳಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಾಗಿ ಈಗಾಗಲೇ  ವಾಹಿನಿ ಒಂದರಲ್ಲಿ ತಿಳಿಸಿದ್ದು, ಕಟೌಟ್ ಮತ್ತು ಬ್ಯಾನರ್ ಅಂತ ಹಣ ಖರ್ಚು ಮಾಡಬೇಡಿ ಎಂದು ಅವರ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

2004ರಲ್ಲಿ ತೆರೆಕಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ರಂಗ sslc’ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ  ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ದುನಿಯಾ ವಿಜಯ್, ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದು, ‘ಪಾಪ ಪಾಂಡು’ ಧಾರಾವಾಹಿಯಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಕ್ಕು ನಲಿಸಿದ್ದಾರೆ.

2007 ರಂದು ‘ದುನಿಯಾ’ ಸಿನಿಮಾದಲ್ಲಿ ಮೊಟ್ಟ ಮೊದಲ ಬಾರಿಗೆ ನಾಯಕನಾಗಿ ನಟಿಸಿದರು. ಈ ಚಿತ್ರ ಭರ್ಜರಿ ಯಶಸ್ಸು ಕಾಣುವ ಮೂಲಕ ಹೊಸ ದಾಖಲೆ ಬರೆಯಿತು. ಇತ್ತೀಚೆಗೆ ನಿರ್ದೇಶಕನಾಗಿಯು ಮಿಂಚುತ್ತಿರುವ ದುನಿಯಾ ವಿಜಯ್ ಅವರ ‘ಭೀಮ’ ಸಿನಿಮಾ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದ್ದು, ಇದರ ಬೆನ್ನಲ್ಲೇ ಅವರ 29 ನೇ ಚಿತ್ರದ ಪೋಸ್ಟರ್ ಈಗಾಗಲೇ ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular